1256 ಕೊರೊನಾ ಪಾಸಿಟಿವ್ :06 ಜನರ ಸಾವು

ಕಲಬುರಗಿ:ಏ.30:ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ 6 ಜನ ನಿಧನರಾಗಿದ್ದಾರೆ,1256 ಪಾಸಿಟಿವ್ ಪ್ರಕರಣ ವರದಿಯಾಗಿದೆ ಎಂದು ಶುಕ್ರವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅಫಜಲಪೂರ ತಾಲೂಕಿನ‌ ಕುಲಾಲಿ ಗ್ರಾಮದ 51 ವರ್ಷದ ಪುರುಷ (ರೋಗಿ ಸಂ.1208273) ಏ. 20 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಮತ್ತು ಮಧುಮೇಹದಿಂದ‌ ಬಳಲುತ್ತಿದ್ದ ಕಲಬುರಗಿಯ ವಿಠ್ಠಲ ನಗರದ 50 ವರ್ಷದ ಪುರುಷ (ರೋಗಿ ಸಂ.1294996) ಏ.21 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.29ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಆಳಂದ ಪಟ್ಟಣದ 39 ವರ್ಷದ ಪುರುಷ (ರೋಗಿ ಸಂ.1317682) ಏ.23 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.29ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಒಕ್ಕಲಗೇರಾ ಬಸವೇಶ್ವರ ದೇವಸ್ಥಾನ ಬಳಿಯ 33 ವರ್ಷದ ಯುವಕ (ರೋಗಿ ಸಂ.1346338) ಏ.24 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ 65 ವರ್ಷದ ವೃದ್ಧೆ (ರೋಗಿ ಸಂ.1428108) ಏ.24 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.29ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಎಂ.ಬಿ.ನಗರದ ನಿವಾಸಿ 84 ವರ್ಷದ ವೃದ್ಧೆ (ರೋಗಿ ಸಂ.1450647) ಏ.27 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.30ಕ್ಕೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 466 ಜನ ನಿಧನರಾಗಿದ್ದಾರೆ
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 1256 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 06 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 39212 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 788 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 30352 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.8394 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 06 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 06 ಜನರ ಸಾವಿನೊಂದಿಗೆ ಈ ವರೆಗೆ 466 ಜನರು ಸಾವಿಗೀಡಾದಂತಾಗಿದೆ