1279ವಿದ್ಯಾರ್ಥಿಗಳು ನವೋದಯ ಪರೀಕ್ಷೆಗೆ ನೊಂದಣಿ.

ಸಂಜೆವಾಣಿವಾರ್ತೆ

 ಹರಪನಹಳ್ಳಿ.ಜ.22; 2024-25ನೇ ಸಾಲಿನಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ ಇಂದು ಬೆಳಿಗ್ಗೆ 11.30ರಿಂದ ಮದ್ಯಾಹ್ನ 1.30 ರವರೆಗೆ ಜರುಗಿತು.ಪಟ್ಟಣದ 5 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ, ಪ್ರಸಕ್ತ ವರ್ಷ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ 1279 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿಯಾಗಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಿಂದ ಪೋಷಕರು ತಮ್ಮ ಮಕ್ಕಳನ್ನು ಕರೆತಂದು, ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ, ನೊಂದಾಣಿ ಸಂಖ್ಯೆ ಪರಿಶೀಲಿಸಿಕೊಂಡು ಕೊಠಡಿಗಳಿಗೆ ಬಿಟ್ಟುಬರುತ್ತಿರುವ ದೃಶ್ಯ ಕಂಡು ಬಂತು.ಯಾವುದೇ ತೊಂದರೆಗಳು ಇಲ್ಲದಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಯು.ಬಸವರಾಜಪ್ಪ ತಿಳಿಸಿದ್ದಾರೆ.ಪರೀಕ್ಷಾ ಕೇಂದ್ರದ ಸುತ್ತಲೂ ಸೂಕ್ತ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.