13 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು,ಜು.೬-ಕರಾವಳಿ ಕರ್ನಾಟಕ ಸೇರಿದಂತೆ ೧೩ ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜುಲೈ ೧೦ ರವರೆಗೆ ಭಾರಿ ಮಳೆ ಸುರಿಯಲಿದೆ.ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರಜಿಲ್ಲೆಗಳು.ರಾಜ್ಯಾದ್ಯಂತ ಮುಂಗಾರು ಚುರುಕುಗೊಳ್ಳುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ, ಹೊನ್ನಾವರ, ಶಿರಾಲಿ, ಮೂಲ್ಕಿ, ಬೆಳ್ತಂಗಡಿ, ಕಾರ್ಕಳ, ಕೊಲ್ಲೂರು, ಗೇರುಸೊಪ್ಪ, ಕುಮಟಾ, ಮಂಗಳೂರು, ಮಾಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಪಣಂಬೂರು, ಧರ್ಮಸ್ಥಳ, ಪುತ್ತೂರು, ಕೋಟ, ಸಿದ್ದಾಪುರ, ಮುಧೋಳ, ಮಂಕಿ, ಗೋಕರ್ಣ, ನಿರ್ಣಾ, ಉಪ್ಪಿನಂಗಡಿ, ಬೇಲಿಕೇರಿ, ಕದ್ರಾ, ಕೊಟ್ಟಿಗೆಹಾರ, ಅಡಕಿ, ಭಾಗಮಂಡಲ, ಅಂಕೋಲಾ, ಕ್ಯಾಸಲ್‌ರಾಕ್, ಕಮ್ಮರಡಿಯಲ್ಲಿ ಭಾರಿ ಮಳೆಯಾಗಿದೆ.
ಮಂಚಿಕೆರೆ, ಸುಬ್ರಹ್ಮಣ್ಯ, ಶೃಂಗೇರಿ, ಜಯಪುರ, ಲಿಂಗನಮಕ್ಕಿ, ಸಿದ್ದಾಪುರ, ಸುಳ್ಯ, ಬೀದರ್, ದೇವದುರ್ಗ, ಕಳಸ, ಕೊಪ್ಪ, ವಿರಾಜಪೇಟೆ, ರಾಯಲ್‌ಪಾಡು, ಮಹಾಗಾಂವ, ಶ್ರೀಮಂಗಲ, ನಾಪೋಕ್ಲು, ತಾಳಗುಪ್ಪ, ಹುಂಚದಕಟ್ಟೆ, ಮಾನ್ವಿ, ಮಸ್ಕಿ, ರಾಜೇಶ್ವರ, ಹಳಿಯಾರ್ತಿ, ಶೋರಹಟ್ಟಿ, ಶೋರಹಟ್ಟಿ ಅಕ್ಕಿಆಲೂರ, ಕಲಘಟಗಿ, ಸೈದಾಪುರ, ಕಕ್ಕರಿ,ರಾಯಚೂರು, ಹೊಸಕೋಟೆ, ಪಾವಗಡ, ಹಾರಂಗಿ, ಸಮನಿಸಂತೆ, ಬಂಡೀಪುರ, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಹರಪನಹಳ್ಳಿಯಲ್ಲಿ ಮಳೆಯಾಗಿದೆ.ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ೨೪ ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ ೪೫-೫೫ ಕಿ.ಮೀ ನಿಂದ ೬೫ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಒಂದೆರಡು ಬಾರಿ ಸಾಧಾರಣ ಮಳೆಯಾಗಲಿದೆ. ಎಚ್‌ಎಎಲ್‌ನಲ್ಲಿ ಗರಿಷ್ಠ ತಾಪಮಾನ ೨೭.೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೧೯.೧ ಡಿಗ್ರಿ ಸೆಲ್ಸಿಯಸ್, ನಗರದಲ್ಲಿ ಗರಿಷ್ಠ ತಾಪಮಾನ ೨೭.೧ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೨೦.೨ ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ ೨೯.೫ ದಾಖಲಾಗಿದೆಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೨೦.೪ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.