13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಕಲಬುರಗಿ,ಸೆ.22-ಕೊಲೆ, ವಂಚನೆ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.
ನಗರದ ತಾರಫೈಲ್‍ದ ಬಬಲು ಅಲಿಯಾಸ್ ಪಟ್ಲಾ ತಂದೆ ಸಲೀಂ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈತ ಕೊಲೆ, ವಂಚನೆ ಪ್ರಕರಣಗಳಲ್ಲಿ 2010 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಉಪ ಪೊಲೀಸ್ ಆಯುಕ್ತರಾದ ಕನಿಕಾ ಸಿಕ್ರಿವಾಲ್, ಐ.ಎ.ಚಂದ್ರಪ್ಪ, ದಕ್ಷಿಣ ಉಪ ವಿಭಾಗದ ಎಸಿಪಿ ಭೂತೇಗೌಡ ಅವರ ಮಾರ್ಗದರ್ಶನದಲ್ಲಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಇನ್ಸಪೆಕ್ಟರ್ ಶಕೀಲ್ ಅಂಗಡಿ ಅವರ ನೇತೃತ್ವದಲ್ಲಿ ಹೆಡ್ ಕಾನ್ಸಸ್ಟೇಬಲ್ ವೇದರತ್ನಂ ಅವರು ತನಿಖೆ ನಡೆಸಿ ಆರೋಪಿ ಬಬ್ಲುನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಈ ಕಾರ್ಯವನ್ನು ನಗರ ಪೊಲೀಸ್ ಆಯುಕ್ತ ಚೇತನ್ ಆರ್.ಅವರು ಶ್ಲಾಘಿಸಿದ್ದಾರೆ.