13 ಸಾವಿಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಂದ ಭಾರತ ಭೂಪಟದಲ್ಲಿ ಸಂವಿಧಾನ ಓದು

ಸಂಜೆವಾಣಿ ವಾರ್ತೆದಾವಣಗೆರೆ; ಸೆ.೧೬; ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಂವಿಧಾನ ಪೀಠಿಕೆಯನ್ನು ಪ್ರತಿಜ್ಞಾ ವಿಧಿ ಮಾಡುವ ಮೂಲಕ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಸರ್ವಜನರ ಏಕಧ್ವನಿ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನಕ್ಕೆ ಅದರದ್ದೇ ಆದಂತಹ ಇತಿಹಾಸವಿದೆ. ಸಂವಿಧಾನವನ್ನು ರಚಿಸಿದ ಡಾ; ಬಿ.ಆರ್.ಅಂಬೇಡ್ಕರ್ ಅವರ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆಯಲ್ಲಿ ರಚಿತವಾದ ಭಾರತ ಸಂವಿಧಾನಕ್ಕೆ ಒಳಪಟ್ಟು ದೇಶವನ್ನು ಮುನ್ನಡೆಸೋಣ ಎಂದರು.
 ಸಿದ್ದಗಂಗಾ ಸಂಸ್ಥೆಯ 3500 ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಧ್ವಜದ ತ್ರಿವರ್ಣ ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಭಾರತದ ಭೂಪಟ ಪ್ರದರ್ಶಿಸಿ, ಸಂವಿಧಾನ ಓದುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಮೇಯರ್ ವಿನಾಯಕ ಬಿ.ಹೆಚ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಾಮಗೊಂಡ ಬಸರಗಿ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಉಪಸ್ಥಿತರಿದ್ದರು.  ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ. ಕೆ ಸ್ವಾಗತಿಸಿದರು.