ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಆರ್.ರಘು ಕೌಶಲ್ಯ  ಚಿತ್ರದುರ್ಗ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದಲ್ಲಿ 112 ವರ್ಷದ ಇತಿಹಾಸವಿರುವ ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ಭೇಟಿ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರಾದ ಎಂ.ನಿಶಾನಿ ಜಯಣ್ಣ ನಿಗಮದ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರಾದ ಆರ್.ಕೆ.ಶ್ಯಾಮ್, ಸೊಸೈಟಿಯ ನಿರ್ದೇಶಕ ನಾಗರಾಜ್ ಬೇದ್ರೆ, ಶ್ರೀನಿವಾಸ್, ಚಿಕ್ಕಣ್ಣ, ಬಿಜೆಪಿ ಜಿಲ್ಲಾ ಓಬಿಸಿ ಅಧ್ಯಕ್ಷ ಪ್ರವೀಣ್, ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಆರ್.ವೆಂಕಟೇಶ್, ಕಮ್ಯುನಿಷ್ಟ್ ಪಕ್ಷದ ಮುಖಂಡರಾದ ಜಿ.ಸಿ.ಸುರೇಶ್‌ಬಾಬು, ರೈತ ಮೋರ್ಚಾದ ಶಿವನಕೆರೆ ರಾಜು ಇತರರು ಉಪಸ್ಥಿತರಿದ್ದರು.