ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಶಾಸಕರಾದ ಅಮೃತ ದೇಸಾಯಿ, ಸಿ.ಎಮ್. ನಿಂಬಣ್ಣವರ, ವಿ.ಪ ಸದಸ್ಯ ಎಸ್.ವಿ.ಸಂಕನೂರ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಕೆ. ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಲಜೀವನ ಮಿಷನ್ ಆಯುಕ್ತ ಆರ್. ವಿಶಾಲ್, ಗ್ರಾಮೀಣಾಭಿವೃದ್ಧಿ ಆಯುಕ್ತ ಅನಿರುದ್ಧ ಶ್ರವಣ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಮತ್ತಿತರರು ಉಪಸ್ಥಿತರಿದ್ದರು.