ಕರ್ನಾಟಕ ರಕ್ಷಣಾ ವೇದಿಕೆ, ಮುಧೋಳ ತಾಲ್ಲೂಕು ಘಟಕದ 14 ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಆಗಮಿಸಿದ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ, ಸಣ್ಣೀರಪ್ಪ, ಸೊಂಪೂರ, ಅಶ್ವಿನಿ ಗೌಡ ಅವರನ್ನು ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧ್ಯಕ್ಷರಾದ ರಮೇಶ ಬದ್ನೂರ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಸ್ವಾಗತಿಸಲಾಯಿತು. ಇದೇ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನವರ ಹಾಗೂ ಸಂವಿಧಾನ ಶಿಲ್ಪಿ ಡಾ ಬಿ. ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.