ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಶಿವಶರಣ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಪ್ಷಾರ್ಪನೆ ಮಾಡಿ ನಮಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಮುಖಂಡರಾದ ತುಳಸಪ್ಪಾ ಪೂಜಾರ, ಬಸವರಾಜ ಮುತ್ತಳ್ಳಿ, ಭೀಮಪ್ಪ ನೇಮಿಕಲ್, ಅರ್ಜುನ ವಡ್ಡರ, ಮಂಜುನಾಥ ಭೋವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.