15 ಲಕ್ಷ ಮೌಲ್ಯದ ವೆಂಟಿಲೇಟರ್ ಕದ್ದೊಯ್ದ ಖತರ್ನಾಕ್ ಕಳ್ಳರು

ಬೀದರ:ಜೂ.10: ನಗರದ ಬ್ರೀಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಸುಮಾರು 15 ಲಕ್ಷ ಬೆಲೆ ಬಾಳುವ ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಬೀದರ ಜಿಲ್ಲೆಯಲ್ಲಿ ಸದ್ಯ ಕೊರೊನಾ‌ ಸೋಂಕಿತರ ಪ್ರಜರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಬ್ರಿಮ್ಸ್ ಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆಯಾಗಿದೆ. ಇದನ್ನ ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಆಸ್ಪತ್ರೆಯ ಹಿಂಭಾಗದಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವುದನ್ನು ನೋಡಿ ಕಿಟಕಿಯ ಗಾಜು ಹೊಡೆದು ಒಳಗೆ ಪ್ರವೇಶಿಸಿ, ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಳ್ಳತನ ಮಾಡಿದ್ದಾರೆ.ಚಂದ್ರಕಾಂತ ಮೇದಾ ಅವರ ದೂರಿನ ಮೇರೆಗೆ ನ್ಯೂ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು‌ ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್.ಪಿ ಗೋಪಾಲ್ ಬ್ಯಾಕೋಡ ಅವರು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.