159 ಕೋಟಿ ವೆಚ್ಚದಲ್ಲಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ

ಬೆಂಗಳೂರು, ನ. ೨೨- ಪ್ರಸ್ತಕ ಸಾಲಿನಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಶಾಲೆಗೆ ೧೦೯ ಕೋಟಿ ವೆಚ್ಚ ಮಾಡಲಾಗಿದ್ದು, ಹೆಚ್ಚುವರಿ ೫೦ ಕೋಟಿ ವೆಚ್ಚ ಮಾಡಿ, ಪೂರ್ಣಗೊಳಿಸುವುದಾಗಿ ಹೇಳಿದರು.
ಕನಕದಾಸ ಜಯಂತಿ ಪ್ರಯುಕ್ತ ಶಾಸಕರ ಭವನದಲ್ಲಿ ಪ್ರತಿಮೆಗೆ ಮಾರ್ಲಾಪಣೆ ಮಾಡಿದ ಬಳಿಕ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.
ಯುವಕರಿಗಾಗಿ ಆದರ್ಶಪ್ರಾಯ ಮತ್ತು ಶಿಸ್ತಿನ ಶಾಲೆ ನಿರ್ಮಾಣ ಮಾಡುತ್ತಿದ್ದೇವೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿ ಪತ್ರವನ್ನು ಬರೆದಿದ್ದೇನೆ. ಸೈನಿಕ ಶಾಲೆ ಪೂರ್ಣಗೊಂಡ ನಂತರ ಕೇಂದ್ರ ರಕ್ಷಣಾ ಇಲಾಖೆ ತೆಗೆದುಕೊಳ್ಳಬೇಕು. ಇದು ರಾಜ್ಯ ಸರ್ಕಾರ ಇಚ್ಚೆಯಾಗಿದ್ದು, ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದರು.
ಕನಕದಾಸರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿದೆ. ಅವರ ವಿಚಾರಗಳನ್ನು ಇಟ್ಟುಕೊಂಡು ಬಾಡ ಗ್ರಾಮದಲ್ಲಿ ಕನಕದಾಸರ ಅರಮನೆ ನಿರ್ಮಾಣ ಮಾಡಲಾಗಿದೆ ಎಂದರು.
ಕಾಗಿನೆಲೆಯಲ್ಲಿ ಸ್ಮಾರಕ ನಿರ್ಮಾಣ ಮಾಡಿದ್ದೇವೆ. ಕನಕದಾಸರ ತ್ರಿಪತಿಗಳು, ದಾಸರ ಪದಗಳು ಆದರ್ಶ ಸಂಕಲ್ಪವಾಗುವ ದಿನವಾಗಿದೆ ಎಂದರು.