175 ಕೊರೊನಾ ಪಾಸಿಟಿವ್ :09 ಜನರ ಸಾವು

ಕಲಬುರಗಿ:ಮೇ.26: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 175 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 09 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 59523 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
1231 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 55835 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
2939 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 09 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 09 ಜನರ ಸಾವಿನೊಂದಿಗೆ ಈ ವರೆಗೆ 749 ಜನರು ಸಾವಿಗೀಡಾದಂತಾಗಿದೆ .