18 ರಿಂದ 44 ವರ್ಷದವರಿಗೆ ಉಚಿತ ಲಸಿಕೆ ನೀಡಲು ಮಹಾ ನಿರ್ಧಾರ

ಮುಂಬೈ, ಏ.28- ಹದಿನೆಂಟರಿಂದ 44 ವರ್ಷದೊಳಗಿನ ವಯೋಮಾನದವರಿಗೆ ಉಚಿತ ಕೊರೊನಾ ಲಸಿಕೆ ನೀಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಈ ವಯೋಮಾನದವರಿಗೆ ಉಚಿತ ಲಸಿಕೆ ನೀಡಲು 6,500 ಕೋಟಿ ರೂ ವೆಚ್ಚವಾಗಲಿದೆ ಎಂದು‌ ತಿಳಿಸಿದರು.
ಈಗಾಗಲೇ ಹಲವು ರಾಜ್ಯಗಳು ಉಚಿತ ಲಸಿಕೆ ನೀಡುವುದಾಗಿ ಪ್ರಕಟಿಸಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರವು ಉಚಿತ ಲಸಿಕೆ ನೀಡಲು ಮುಂದಾಗಿದೆ.
ಕರ್ನಾಟಕ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಉಚಿತವಾಗಿ ನೀಡಲು ನಿರ್ಧರಿಸಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.