18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಕೋವಿಡ್ ಲಸಿಕೆ: ರಾಮಚಂದ್ರನ್ ಆರ್

ಬೀದರ:ಎ.28: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ 1ರಿಂದ ಕೊವಿಡ್ ಲಸಿಕೆ ಸಿಗಲಿದೆ ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದರು.
ಏಪ್ರೀಲ್ 27ರಂದು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಎಲ್ಲ ಕಡೆಗಳಲ್ಲಿ ಸಾವಿನಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಹೀಗಾಗಿ ಕೋವಿಡ್ ಬಗ್ಗೆ ಯಾರು ಕೂಡ ನಿರ್ಲಕ್ಷ್ಯ ವಹಿಸಬಾರದು. ಇದುವರೆಗೆ ಲಸಿಕೆ ಪಡೆಯದೇ ಇರುವ 45 ವರ್ಷ ಮೇಲ್ಪಟ್ಟವರು ಕೂಡಲೇ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಸಹಕರಿಸಬೇಕೆಂದು ವಿನಂತಿಸಿದರು.