ಲಕ್ಷ್ಮೇಶ್ವರ ಸಮೀಪದ ಮುಕ್ತಿಮಂದಿರ ಧರ್ಮಕ್ಷೇತ್ರದ ಜಾತ್ರಾ ಮಹೋತ್ಸವದ ಎರಡನೇ ದಿನದಂದು ಕಡುಬಿನ ಕಾಳಗವನ್ನು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಭಗವತ್ಪಾದರ ಸಾನಿಧ್ಯದಲ್ಲಿ, ಕ್ಷೇತ್ರದ ಪಟ್ಟಾಧ್ಯಕ್ಷರಾದ ವಿಮಲರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಸಮ್ಮುಖದಲ್ಲಿ ಕಲಾದಗಿ ಪಂಚಗ್ರಹ ಹಿರೇಮಠದ ಶ್ರೀಗಳು ನೆರವೇರಿಸಿದರು.