ಕರ್ನಾಟಕ ಭೋವಿ ಸಮಾಜ ಸೇವಾ ಸಂಘವು ಬೆಂಗಳೂರಿನ ಸಿಂಗಾಪುರ ಲೇ ಔಟ್ ನಲ್ಲಿ ಏರ್ಪಡಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಹಾಗೂ ಸರ್ವಧರ್ಮಗಳ ಗುರುವಂದನಾ ಕಾರ್ಯಕ್ರಮದಲ್ಲಿ ದಾವಣಗೆರೆಯವರಾದ ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಅವರಿಗೆ ಭೋವಿ ಸಮಾಜದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸನ್ಮಾನಿಸಿದರು.ಈ ವೇಳೆ ವಾಲ್ಮೀಕಿ ಪ್ರಸನ್ನಾನಂದ ಶ್ರೀ, ಶಾಂತವೀರ ಶ್ರೀ, ಆನಂದ ಗುರೂಜಿ ,ಕೇಂದ್ರ ಸಚಿವ ಸದಾನಂದ ಗೌಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಇತರರಿದ್ದರು.