ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯ ಅಂಗವಾಗಿ ಆಯ್ಕೆಯಾದ 400 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮವನ್ನು ಗಿಡಗಳಿಗೆ ನೀರುಣಿಸುವ ಮೂಲಕ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೀಶ ಪಾಟೀಲ್, ಪುರಸಭೆ ಅಧ್ಯಕ್ಷ ಮಂಜುನಾ ಜಾದ್ವ್, ಉಪಾಧ್ಯಕ್ಷೆ ಶ್ರೀಮತಿ ನಾಶಿಪುಡಿ, ಬಸವರಾಜ ಕಟ್ಟಿಮನಿ, ಕುದಾನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.