ನಗರದ ಸಿದ್ಧಾರೂಢ ಸ್ವಾಮಿ ರೇಲ್ವೆ ನಿಲ್ದಾಣದಲ್ಲಿಂದು ಸ್ವಾಮಿ ವಿವೇಕಾನಂದರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಜಗದೀಶ ಶೆಟ್ಟರ್, ವಿ.ಪ ಸಭಾಪತಿ ಬಸವರಾಜ ಹೊರಟ್ಟಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಶಾಸಕ ಪ್ರಸಾದ ಅಬ್ಬಯ್ಯ, ಮಹೇಂದ್ರ ಸಿಂಘಿ, ಸ್ವಾಮಿ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ, ರಘುವೀರಾನಂದ ಸ್ವಾಮೀಜಿ, ವಿಜಯಾನಂದ ಸರಸ್ವತಿ ಸ್ವಾಮೀಜಿ, ರೇಲ್ವೆ ಅಧಿಕಾರಿಗಳು, ಸಿಬ್ಬಂದಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.