ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ಅನುದಾನದ ಅಡಿಯಲ್ಲಿ ಅಂದಾಜು ಮೊತ್ತ 8 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಶ್ರೀ ರಾಯ ಬಸವೇಶ್ವರ ದೇವಸ್ಥಾನದ ಸಮುದಾಯ ಭವನದ ನಿರ್ಮಾಣಕ್ಕೆ ಶನಿವಾರದಂದು ಶಾಸಕರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.