ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು.