2ನೇ ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಸಾವು

ಬೆಂಗಳೂರು, ಜು.30-ಆಟವಾಡುತ್ತಿದ್ದ 12 ವರ್ಷದ ಬಾಲಕನೋರ್ವ ಆಕಸ್ಮಿಕವಾಗಿ ಅಪಾರ್ಟ್‌ ಮೆಂಟ್‌ ನ 2ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಹುಳಿಮಾವು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದ ಎಂಎಲ್‌ ಎ ಲೇಔಟ್‌ನ ಸಿವಿಕೆ ಮೀನಾಕ್ಷಿ ಅಪಾರ್ಟ್‌ ಮೆಂಟ್‌ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಅದಿತ್‌ ಮೃತಪಟ್ಟ ಬಾಲಕನಾಗಿದ್ದಾನೆ.
ಶನಿವಾರವಾಗಿದ್ದರಿಂದ ಶಾಲೆಯಿಂದ ಮಧ್ಯಾಹ್ನ ಮರಳಿದ ನಂತರ 2ನೇ ಮಹಡಿಯ ಬಾಲ್ಕನಿಯಲ್ಲಿ ಅದಿತ್‌ ಆಟವಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ
ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.