2ನೇ ಸುತ್ತಿನ ಮಿಷನ್ ಇಂದ್ರದನುಷ್ 0.5 ಸಭೆ

ದಾವಣಗೆರೆ, ಆ. 25; ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಇಂದ್ರ ಧನುಷ್ ಅಭಿಯಾನ ಹಮ್ಮಿಕೊಂಡಿದ್ದು, ಈಗಾಗಲೇ ಮೊದಲನೇ ಹಂತ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದರು.ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 11 ರಿಂದ 16 ರವರೆಗೆ ನಡೆಯುವ 2ನೇ ಸುತ್ತಿನ ಆಖಿಈ(ಆisಣಡಿiಛಿಣ ಖಿಚಿsಞ ಈoಡಿಛಿe) ಒissioಟಿ Iಟಿಜಡಿಚಿಜhಚಿಟಿush 5.0 (IಒI)  ಮತ್ತು ಆರ್.ಐ ಲಸಿಕಾಕರಣ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈಗಾಗಲೇ ಎಲ್ಲಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಹಾಗೂ ಶಾಲಾ ಶಿಕ್ಷಣಾದಳಿಗೆ  ಹಾಗೂ ಶಾಲಾ ಶಿಕ್ಷಣಾಧಿಕಾರಿಗಳಿಗೆ ಲಸಿಕಾಕರಣದ ಕುರಿತು ಮಾರ್ಗದರ್ಶನವನ್ನು ನೀಡಿದ್ದು, ದಡಾರ, ರುಬೆಲ್ಲಾ ಲಸಿಕೆಗಳಿಂದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಮತ್ತು ಮಿಷನ್ ಇಂದ್ರಧನುಷ್ 0.5 ಎರಡನೇ ಹಂತವನ್ನು ಸಹ ಯಶಸ್ವಿಯಾಗಿ ಪೂರ್ಣಗೊಳಿಸಬೇಕಾಗಿದೆ ಎಂದರು. ಜಿಲ್ಲೆಯಲ್ಲಿ ಈಗಾಗಲೇ ಶೇ.98 ರಷ್ಟು ಗರ್ಭಿಣಿ ಮಹಿಳೆಯರು ಲಸಿಕೆಯನ್ನು ಪಡೆದಿದ್ದಾರೆ. ಪರಿಣಾಮಕಾರಿ ಮಿಷನ್ ಇಂಧ್ರಧನುಷ್ 5.0 ರಲ್ಲಿ ನೀಡಲಾದ ಲಸಿಕೆಗಳ ವಿವರವನ್ನು ಯುವಿನ್ ತಂತ್ರಾಂಶದಲ್ಲಿ ದಾಖಲಿಸುವ ಮೂಲಕ ಈ ಲಸಿಕಕಾರಣ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು ಎಂದರು. ಎಲ್ಲಾ ತಾಯಿ ಕಾರ್ಡ್ ಎಲ್ಲ ಪಾಲಕರಿಗೆ ಕಡ್ಡಾಯವಾಗಿ ಒದಗಿಸಬೇಕು, ಅದರಲ್ಲಿ ಮಕ್ಕಳ ಬೆಳವಣಿಗೆಗೆ ಅಪೌಷ್ಠಿಕತೆ ಲಸಿಕೆಯ ಸಂಪೂರ್ಣ ಮಾಹಿತಿ ಇದ್ದು, ಪ್ರತಿಯೊಬ್ಬರು ತಪ್ಪದೇ ವಯಸ್ಸಿಗೆ ಅನುಗುಣವಾಗಿ ಲಸಿಕೆಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಥವಾ ಅಂಗನವಾಡಿ ಕೇಂದ್ರಗಳಲ್ಲಿ ಪಡೆಯಬಹುದು ಎಂದು ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ಮಾತನಾಡಿ ಆಸ್ಪತ್ರೆಗಳಲ್ಲಿ ಲೆನ್ಸ್. ಸ್ಟೇಥೋಸ್ಕೋಪ್, ಸಿಸ್ಟಮ್ಸ್ ಇನ್ನಿತರೆ ಯಾವುದೇ ವೈದ್ಯಕೀಯ ಸಲಕರಣೆಗಳ ಅವಶ್ಯಕತೆಯಿದ್ದಲ್ಲಿ ಹಾಗೂ ಕಟ್ಟಡಗಳ ಪೇಟಿಂಗ್ ಮತ್ತು ದುರಸ್ಥಿ ಮಾಡಿಸಬೇಕೆಂದಿದ್ದಲ್ಲಿ ವರದಿ ನೀಡಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಆರ್.ಸಿ.ಹೆಚ್.ಒ ಅಧಿಕಾರಿ ಶ್ರೀಮತಿ ಮೀನಾಕ್ಷಿ, ಡಿ.ಡಿ.ಪಿ.ಐ ತಿಪ್ಪೇಶಪ್ಪ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಮಲ್ಲ ನಾಯ್ಕ್, ಹಾಗೂ ತಾಲ್ಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

=====