2ನೇ ಹಂತ: ನಾಳೆ ಮತದಾನ

14 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಿದ್ಧತೆ: ಘಟಾನುಘಟಿಗಳ ಭವಿಷ್ಯ ನಿರ್ಧಾರ

ಬೆಂಗಳೂರು:ಏ.೬- ಜಿದ್ದಾಜಿದ್ದಿನ ಅಖಾಡವೆನಿಸಿರುವ ಲೋಕಸಭಾ ಚುನಾವಣೆಯಲ್ಲಿ ಎರಡನೇ ಹಂತದಲ್ಲಿ ೧೪ ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ ಮತ ಸಂಭ್ರಮಕ್ಕೆ ವೇದಿಕೆ ಸಜ್ಜಗೊಂಡಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮತಗಗಟ್ಟೆ ಕೇಂದ್ರಗಳ ಮುಂದೆ ಬಿಗಿಭದ್ರತೆ ಕೈಗೊಳ್ಳಲಾಗಿದೆ.
೧೪ ಕ್ಷೇತ್ರಗಳ ಮತದಾನಕ್ಕಾಗಿ ಆಯಾ ಮತಗಗಟ್ಟೆಗಳಿಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಚುನಾವಣಾ ಸಾಮಗ್ರಿಗಳೊಂದಿಗೆ ತೆರಳಿದರು. ಮತಗಟ್ಟೆ ಕೇಂದ್ರಕ್ಕೆ ತೆರಳುವ ಮುನ್ನ ಇವಿಎಂಗಳ ಕ್ಲಸ್ಟರ್ ನಡೆಸಲಾಯಿತು.
ಈಗಾಗಲೇ ಬಹಿರಂಗ ಪ್ರಚಾರಕ್ಕೆ ತರೆಬಿದ್ದಿರುವ ಹಿನ್ನೆಲೆಯಲ್ಲಿ ಉಮೇದುವಾರರು ಮನೆ ಮನೆಗೆ ತೆರಳಿ ಕಡೆಗಳಿಗೆಯಲ್ಲಿ ಮತದಾರ ಮನಗೆಲ್ಲಲು ಕಸರತ್ತು ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿ.ವೈ.ರಾಘವೇಂದ್ರ, ಎಸ್. ಬಂಗಾರಪ್ಪ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗದಲ್ಲಿ ಬಂಡಾಯ ಆಥ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪಮುಖ್ಯಮಂತ್ರ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿಗಳಾದ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿ. ಶ್ರೀರಾಮುಲು, ತುಕಾರಾಂ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ದಮನಿ, ಉಮೇಶ್ ಜಾಧವ್, ಸಚಿವೆ ಲಕ್ಷೀ ಹೆಬ್ಬಾಳ್ಕರ್ ಪುತ್ರ, ಮೃಣಾಳ್ ಹೆಬ್ವಾಳ್ಕರ್, ಸಚಿವ ಉಮೇಶ್ ಖಂಡ್ರೆ ಪುತ್ರ, ಸಾಗರ್ ಖಂಡ್ರೆ, ಪ್ರಭಾ ಮಲ್ಲಿಕಾರ್ಜುನ್, ಸಂಯುಕ್ತ ಪಾಟೀಲ್, ಭಗವಂತ್ ಖೂಬಾ ಸೇರಿದಂತೆ ಘಟಾನುಘಟಿಗಳ ಭವಿಷ್ಯವನ್ನು ಮತದಾರ ಪ್ರಭು ನಾಳೆ ನಿರ್ಧರಿಸಲಿದ್ದಾನೆ. ಒಟ್ಟು ೨೦೬ ಪುರುಷರು, ೨೧ ಸೇರಿದಂತೆ ಒಟ್ಟು ೨೦೭ ಅಭ್ಯರ್ಥಿಗಳು ಕಣದಲ್ಲಿದ್ದಾರೆ.


೧೪ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರ ನಾಯಕರು ಮತಬೇಟೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗ ಗೌಡ, ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಬಿರುಸಿನ ಪ್ರಚಾರ ನಡೆಸಿದ್ದರು.

ಬಾಕ್ಸ್
ಎಲ್ಲೆಲ್ಲಿ ಮತದಾನ
ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್,ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆಯವರೆಗೆ ಮತದಾನ ನಡೆಯಲಿದೆ.

ಬಾಕ್ಸ್
೨.೫೯ ಕೋಟಿ ಮತದಾರರು
ನಾಳೆ ನಡೆಯಲಿರುವ ಎರಡನೇ ಹಂತದಲ್ಲಿ ನಡೆಯಲಿರುವ ಮತದಾನದಲ್ಲಿ ೨,೫೯,೧೭,೧೯೩ ಮಂದಿ ಮತಚಲಾಯಿಸುವ ಹಕ್ಕು ಚಲಾಯಸಲಿದ್ದಾರೆ.೧,೨೯,೪೮,೯೭೮ ಪುರುಷರು, ೧,೨೯೯,೬೬,೫೭೦ ಮಹಿಳೆಯರು, ಇತರೆ ೧,೯೪೫ ಮತದಾರರರು ಮತ ಚಲಾಯಿಸಲಿದ್ದಾರೆ.
೩,೭೮,೧೪೪ ಯುಪ ಪುರುಷ ಮತದಾರರು ಹಾಗೂ ೩,೧೨,೭೦೩ ಯುವ ಮಹಿಳಾ ಮತದಾರರು ಈ ಬಾರಿ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿರುವುದು ವಿಶೇಷ.
೮೫ ವರ್ಷ ಮೇಲ್ಪಟ್ಟವರು,೨.೨೯,೨೬೩ ಮತದಾರರಿದ್ದರೆ, ೩,೪೩೯೬೬ ದಿವ್ಯಾಂಗ ಮತದಾರರ ಹೆಸರು ಪಟ್ಟಿಯಲ್ಲಿವೆ.