2 ಕೋಟಿ ರೂ ನಕಲಿ ನೋಟು ಪತ್ತೆ; ಇಬ್ಬರು ಸೆರೆ

ಹೈದರಾಬಾದ್, ನ.9- ನಗರದ ಗೋಲ್ಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ 7 ಟಾಂಬ್ಸ್ ಬಸ್ ನಿಲ್ದಾಣದ ಬಳಿ 2 ಕೋಟಿ ರೂ. ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಇಬ್ಬರು ತಮ್ಮ ಬ್ಯಾಗ್‌ಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಪರಿಶೀಲಿಸಿದಾಗ 500 ಮತ್ತು 2000 ರೂಪಾಯಿ ಮುಖಬೆಲೆಯ ನಕಲಿ ನೋಟು ಪತ್ತೆಯಾಗಿವೆ.
ನಕಲಿ ನೋಟುಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.