
ಕಲಬುರಗಿ,ಏ.23- ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ನಡೆದಿದೆ.
ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಒಂದು ಲಾರಿ ಹುಮ್ನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿತ್ತು. ಇನ್ನೊಂದು ಲಾರಿ ಜೇವರ್ಗಿಯಿಂದ ಹುಮ್ನಾಬಾದ್ ಕಡೆಗೆ ತೆರಳುತ್ತಿತ್ತು. ಈ ವೇಳೆ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದೆ.
ಅಪಘಾತದಿಂದ ಲಾರಿಗಳ ಮುಂಭಾಗ ಛಿದ್ರ ಛಿದ್ರವಾಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಮಲಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.