2 ಸಾವಿರ ಇಮ್ರಾನ್ ಬೆಂಬಲಿಗರ ಬಂಧನ

ಇಸ್ಲಮಾಬಾದ್, ಮೇ ೧೨- ಪಾಕಿಸ್ತಾನದ ಮಾಜಿ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಅಲ್ಲಿನ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಕ್ರಮವನ್ನು ಪಾಕಿಸ್ತಾನ ಸರ್ಕಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು ದೇಶಾದ್ಯಂತ ೨ ಸಾವಿರ ಮಂದಿ ಇಮ್ರಾನ್ ಖಾನ್ ಪರ ಬೆಂಬಲಿಗರನ್ನು ಬಂಧಿಸಿದೆ.
ಈ ನಡುವೆ ಇಸ್ಲಮಾಬಾದ್ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು ದೇಶದೆಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಮತ್ತು ಕಟ್ಟೆಚ್ಚರ ವಹಿಸಲಾಗಿದೆ.
ಇಮ್ರಾನ್ ಖಾನ್ ಬಂಧನ ಖಂಡಿಸಿ ಪಾಕಿಸ್ತಾನದಲ್ಲಿ ಇಂಟರ್ ನೆಟ್ ಸೇವೆ ಬಂದ್ ಮಾಡಲಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಪಾಕಿಸ್ತಾನ ಸರ್ಕಾರಕ್ಕೆ ವಿವರ ನೀಡುವಂತೆ ಸೂಚಿಸಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆ ಮಾಡುವಂತೆ ಸೂಚಿಸಿರುವ ಸುಪ್ರೀಂಕೋರ್ಟ್ ಆದೇಶಕ್ಕೆ ಪಾಕಿಸ್ತಾನ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಛೀಮಾರಿ ಹಾಕುವ ಕೆಲಸ ಮಾಡಿದೆ.
ಪಾಕಿಸ್ತಾನದ ಸುಪ್ರೀಂ ಕೋರ್ಟ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ “ಕಾನೂನುಬಾಹಿರ” ಎಂದು ಘೋಷಿಸಿತು ತಕ್ಷಣ ಬಿಡುಗಡೆಗೆ ಆದೇಶಿಸಿತ್ತು.
ಹೈಕೋರ್ಟ್‌ಗೆ ಹಾಜರು:
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಮಾಬಾದ್ ಹೈಕೋರ್ಟ್ ಹಾಜರು ಪಡಿಸಲಾಗಿದ್ದು ವಿಚಾರಣೆ ನಡೆದಿದೆ.

ಇಮ್ರಾನ್ ಖಾನ್ ಅವರನ್ನು ಮತ್ತೊಮ್ಮೆ ಪಾಕಿಸ್ತಾನ ಸರ್ಕಾರ ಬಂಧಿಸುವ ಸಾಧ್ಯತೆಗಳಿಗೆ ಎಂದು ಪಾಕಿಸ್ತಾನ ಸರ್ಕಾರದ ಉನ್ನತ ಮೂಲಗಳು ಈ ವಿಷಯ ತಿಳಿಸಿವೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ಎರಡು ದಿನಗಳ ಕಾಲ ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಬೆಂಬಲಿಗರಿಂದ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾದ ನಂತರ ಪಾಕಿಸ್ತಾನದ ರಾಜಧಾನಿಯಲ್ಲಿ ಸೈನಿಕರನ್ನು ನಿಯೋಜಿಸಲಾಗಿದೆ.