2 ಸಾವಿರ ನೋಟು ಬದಲಾವಣೆ: ಅಕ್ಟೋಬರ್ 7 ರ ತನಕ ಗಡುವು ವಿಸ್ತರಣೆ

ನವದೆಹಲಿ,ಸೆ.30- ದೇಶದಲ್ಲಿ 2 ಸಾವಿರ ರೂಪಾಯಿ ನೋಟು ರದ್ದು ಮಾಡಿ ಬ್ಯಾಂಕ್ ಗಳಲ್ಲಿ ಠೇವಣಿ ಅಥವಾ ಬದಲಾವಣೆಗೆ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 7 ತನಕ ಮತ್ತೆ ಗಡುವು ವಿಸ್ತರಿಸಲಾಗಿದೆ.

2,000 ನೋಟುಗಳನ್ನು ಹಿಂದಿರುಗಿಸಲು ಅಥವಾ ಬದಲಾಯಿಸಲು ಅಕ್ಟೋಬರ್ 7 ರವರೆಗೆ ಗಡುವನ್ನು ವಿಸ್ತರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ 2,000 ನೋಟುಗಳನ್ನು ಬ್ಯಾಂಕ್‌ಗಳಿಗೆ ಹಿಂದಿರುಗಿಸಲು ಅಥವಾ ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್ 7 ರವರೆಗೆ ಗಡುವನ್ನು ವಿಸ್ತರಿಸಲಾಗಿದೆ ಎಂದು ಹೇಳಿದೆ.

ಈ ಹಿಂದೆ ಸೆಂಟ್ರಲ್ ಬ್ಯಾಂಕ್ ಸೆಪ್ಟೆಂಬರ್ 30 ಕ್ಕೆ ಗಡುವನ್ನು ನಿಗದಿಪಡಿಸಿತ್ತು. ಮೇ ತಿಂಗಳಲ್ಲಿ, ಆರ್ ಬಿಐI ತನ್ನ ಕ್ಲೀನ್-ನೋಟ್ ನೀತಿಯನ್ನು ಉಲ್ಲೇಖಿಸಿ ಚಲಾವಣೆಯಿಂದ 2,000 ಬ್ಯಾಂಕ್ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತ್ತು.

ಇಂದಿಗೆ ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ ಮತ್ತು ತಕ್ಷಣವೇ ಜಾರಿಗೆ ಬರುವಂತೆ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಬ್ಯಾಂಕುಗಳಿಗೆ ಸಲಹೆ ನೀಡಿತ್ತು

ಮಾರುಕಟ್ಟೆ ಬಿಡುಗಡೆ ಮಾಡಿದ್ದ ಶೇಕಡಾ 90 ಕ್ಕೂ ಅಧಿಕ ನೋಟುಗಳುನ್ನು ಬ್ಯಾಂಕ್ ಗಳಿಗೆ ವಾಪಸ್ ಬಂದಿದೆ ಎಂದು ಆರ್ ಬಿಐ ತಿಳಿಸಿದೆ.