20ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಲೊಗೊ ಬಿಡುಗಡೆ

ಬೀದರ್:ಮಾ.14: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರು 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲೊಗೊವನ್ನು ನಗರದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.

ಮಾರ್ಚ್ 15 ಮತ್ತು 16ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನನಶೆಟ್ಟಿ, ಕೋಶಾದ್ಯಕ್ಷ ಶಿವಶಂಕರ ಟೋಕರೆ , ಶರಣಪ್ಪಾ ಮಿಠಾರೆ, ಕಿರಣ ಪಾಟೀಲ, ಕಸ್ತೂರಿ ಪಟಪಳ್ಳಿ ಸೇರಿದಂತೆ ಇದ್ದರು.