20 ರಂದು ಎ.ಕೆ.ರಾಮೇಶ್ವರಗೆ ಮಕ್ಕಳ ಶ್ರೇಷ್ಠ ಕವಿ ಪ್ರಶಸ್ತಿ ಪ್ರದಾನ

ಕಲಬುರಗಿ,ಏ.16-ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಕವಿ ಬಿ.ಕೆ.ಹೊಂಗಲ ದತ್ತಿ ನಿಧಿ ಹೆಸರಿನಲ್ಲಿ ಕೊಡ ಮಾಡುವ 2023ನೇ ಸಾಲಿನ ಪ್ರಶಸ್ತಿಗೆ ಮಕ್ಕಳ ಕವಿ ಎ.ಕೆ.ರಾಮೇಶ್ವರ ಭಾಜನರಾಗಿದ್ದಾರೆ.
ಪ್ರಶಸ್ತಿಯನ್ನು ಬಿ.ಕೆ.ಹೊಂಗಲ ಅವರ ಜನ್ಮದಿನವಾದ ಏಪ್ರಿಲ್ 20 ರಂದು ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.