200 ಜನರಿಗೆ ಕೋವಿಡ್ ಸೋಂಕು ದೃಢ: ನಾಲ್ವರ ಸಾವು

ಚಿತ್ರದುರ್ಗ,ಮೇ.5;  ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 200 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17,855ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 103, ಚಳ್ಳಕೆರೆ 25, ಹಿರಿಯೂರು 22, ಹೊಳಲ್ಕೆರೆ 26, ಹೊಸದುರ್ಗ 21, ಮೊಳಕಾಲ್ಮುರು ತಾಲ್ಲೂಕಿನಲ್ಲಿ 03 ಪ್ರಕರಣ ಸೇರಿದಂತೆ ಒಟ್ಟು 200 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ  39 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 2203 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 200 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 17,855ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದುವರೆಗೆ ಒಟ್ಟು 81 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 16,301 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1473 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,43,461 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 4,24,920 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,05,451 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 895 ಜನರ ವರದಿ ಬರುವುದು ಬಾಕಿ ಇದೆ. 719 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.