200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೀದರ್: ಜೂ.27:ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಹಾಗೂ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯಲ್ಲಿ

ಸಾಧನೆಗೈದ ಜಿಲ್ಲೆಯ ಗೊಂಡ(ಕುರುಬ) ಸಮುದಾಯದ 200 ವಿದ್ಯಾರ್ಥಿಗಳಿಗೆ ಜುಲೈ 2 ರಂದು ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಶ್ರೀ ಕನಕ ಕನ್ನಡ ಸಾಂಸ್ಕøತಿಕ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ತಿಳಿಸಿದ್ದಾರೆ.

ಶ್ರೀ ಕನಕ ಕನ್ನಡ ಸಾಂಸ್ಕøತಿಕ ಸಂಘದ ವತಿಯಿಂದ ಅಂದು ಬೆಳಿಗ್ಗೆ 10ಕ್ಕೆ ನಗರದ ನೌಬಾದ್‍ನ ಗ್ರಾಮೀಣ ಪೊಲೀಸ್ ಠಾಣೆ ಎದುರಿಗೆ ಇರುವ ವಡ್ಡೆ ಕನ್ವೆನ್ಶನ್ ಹಾಲ್‍ನಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಹಾಗೂ ಸಾಂಸ್ಕøತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ 80ಕ್ಕೂ ಹೆಚ್ಚು ಅಂಕ ಗಳಿಸಿದ ಹಾಗೂ ನೀಟ್ ಕೆಸಿಇಟಿಯಲ್ಲಿ ಉತ್ತಮ ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಹೆಸರು ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಚುನಾಯಿತ ಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.