ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ ಅವರು ಬೆಳಗಾವಿ ವಿಭಾಗದ ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ, ಡಿಡಿಪಿಯು ಹಾಗೂ ಬಿಇಓಗಳು ಮತ್ತು ಡಯಟ್ ಅಧಿಕಾರಿಗಳೊಂದಿಗೆ ಇಂದು ಧಾರವಾಡ ಡಯಟ್ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷಾ ಪೂರ್ವ ಸಿದ್ಧತೆ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಬೆಳಗಾಂವಿ ಡಯಟ್ ಪ್ರಕಟಿಸಿರುವ ಶಿಕ್ಷಣ ಸಂಪದ ಕೃತಿ ಹಾಗೂ ಸಿಸ್ಲೆಪ್ ಲಾಂಛನ ಬಿಡುಗಡೆ ಮಾಡಿದರು. ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಅಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ನಿರ್ದೇಶಕಿ ಮಮತಾ ನಾಯಕ, ಸಿಸ್ಲೆಪ್ ನಿರ್ದೇಶಕ ಬಿ.ಎಸ್. ರಘುವೀರ, ವಿದ್ಯಾ ನಾಡಿಗೇರ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.