2020ಗೆ ಕೋಮಲ್ ರೆಡಿ

ಕೋಮಲ್ ಕುಮಾರ್ ನಾಯಕನಟನಾಗಿ ಅಭಿನಯಿಸುತ್ತಿರುವ 2020 ಚಿತ್ರಕ್ಕೆ ಟಿ. ಆರ್. ಚಂದ್ರಶೇಖರ್ ಬಂಡವಾಳ ಹೂಡುತ್ತಿದ್ದು, ಶೀರ್ಷಿಕೆ ಅನಾವರಣ ಮಾಡಲಾಗಿದೆ.
ಧನ್ಯ ಬಾಲಕೃಷ್ಣ,ಕುರಿ ಪ್ರತಾಪ್ ತಬಲಾ ನಾಣಿ, ಗಿರಿ, ಅಪೂರ್ವ,ಉಮೇಶ್ ಹಾಗೂ ಇತರರೂ ಮುಖ್ಯ ಭೂಮಿಕೆಯಲ್ಲಿದ್ದಾರೆ. ರಾಬರ್ಟ್, ವಿಕ್ಟರಿ2,ಅಮ್ಮ ಐ ಲವ್ ಯು,ತ್ರಿಬಲ್ ರೈಡಿಂಗ್,ಉಪಾಧ್ಯಕ್ಷ ಹಾಗೂ ಇನ್ನೂ ಹಲವು ಚಿತ್ರಗಳಿಗೆ ಸಂಭಾಷಣೆ ಬರೆದ
ಕೆ.ಎಲ್.ರಾಜಶೇಖರ್ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ದಲ್ಲಿ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಶುರುವಾಗಲಿದೆ
ಹಾಸ್ಯ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬಹುತೇಕ ಪಾತ್ರಗಳ ಆಯ್ಕೆ ಪೂರ್ಣಗೊಂಡಿದ್ದು ಮಿಕ್ಕ ಕೆಲವು ಮುಖ್ಯ ಪಾತ್ರಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
ನವೀನ್ ಕುಮಾರ್ .ಎಸ್ ಛಾಯಾಗ್ರಹಣ, ,ಶ್ರೀಧರ್ ಸಂಭ್ರಮ ಸಂಗೀತವಿದೆ.