2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆ ಖಚಿತ

ಕಲಬುರಗಿ ಮೇ 14: ರಾಜ್ಯದ ಜನರು ಆಪರೇಷನ್ ಕಮಲ ಮತ್ತು ಸಮ್ಮಿಶ್ರ ಸರಕಾರಗಳ ಬಗ್ಗೆ ಹೆಚ್ಚು ಬೇಸರಗೊಂಡಿದ್ದಾರೆ. ಹೀಗಾಗಿ 2023ರಲ್ಲಿ ಜನರು ಖಂಡಿತ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಸ್ವರೂಪದ ಅಧಿಕಾರ ನೀಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಐವಾನ್-ಇ-ಶಾಹಿ ಅತಿಥಿ ಗೃಹದ ಬಳಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಬಿಜೆಪಿ ಮತ್ತು ಜೆಡಿಎಸ್ ಕುರಿತು ನಂಬಿಕೆ ಹೊರಟು ಹೋಗಿದೆ. ಇನ್ನೊಂದೆಡೆ ಕಳೆದ 10 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷ ಅತ್ಯಂತ ಜನಪರವಾದ ಸರಕಾರ ಮತ್ತು ಆಡಳಿತ ನೀಡಿದ್ದನ್ನು ಜನರು ನೋಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನಪ್ರಿಯ ಕಾರ್ಯಕ್ರಮಗಳೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚಿಸಲಿದೆ ಎಂದರು