2023 ವಿಧಾನಸಭಾ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ನಡೆಸಲು ರಂಗಾರೆಡ್ಡಿ ಆಗ್ರಹ

ರಾಯಚೂರು,ಜು.26- ಮುಂದಿನ ವಿಧಾನಸಭಾ ಚುನಾವಣೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಅವರ ನೇತೃತ್ವದಲ್ಲಿ ಚುನಾವಣೆಯನ್ನು ನಡೆಸಬೇಕು ಎಂದು ನಗರ ಬಿಜೆಪಿ ಕಾರ್ಯದರ್ಶಿ ಹಾಗೂ,ಕುರುಬ ಸಮಾಜದ ತಾಲೂಕು ಉಪಾಧ್ಯಕ್ಷ ಗೇಟ್ ರಂಗಾರೆಡ್ಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ,ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡ ಹಾಗೂ ಕೇಂದ್ರ ಗೃಹ ಮಂತ್ರಿಗೆ ಒತ್ತಾಯಿಸಿದರು.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇವರನ್ನು ರಾಜ್ಯದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದರೆ 150 ಸೀಟುಗಳ ನಿಚ್ಚಳ ಬಹುಮತ ಬರುತ್ತದೆ.ಹಾಗೂ ಬಿ.ಎಸ್.ವೈ ವಿಜೇಯೇಂದ್ರ ಇವರನ್ನು ರಾಜ್ಯದಲ್ಲಿ ಬಿಜೆಪಿ ರಾಜ್ಯ ಘಟದ ಅಧ್ಯಕ್ಷರನ್ನಾಗಿ ಮಾಡಿದರೆ ರಾಜ್ಯದಲ್ಲಿ ವೀರಶೈವ ಸಮಾಜದವರು ಮತ್ತು ಕುರುಬ ಸಮಾಜದವರು ಇವರ ನಾಯಕತ್ವ ಮಚ್ಚಿ ಮತ್ತು ಇವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ರಾಜ್ಯದಲ್ಲಿ ಪ್ರತಿಯೊಂದು ಸಮಾಜದವರು ಬಿಜೆಪಿ ಬೆನ್ನೆಲುಬಾಗಿ ನಿಂತುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.ಕೇಂದ್ರದಲ್ಲಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ಎಸ್.ವೈ ರಾಘವೇಂದ್ರ ಇವರನ್ನು ಕೇಂದ್ರ ಮಂತ್ರಿಯನ್ನಾಗಿ ಮಾಡಿದರೆ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಯಾವುದೇ ಸಂಶಯವೇ ಇಲ್ಲ ಎಂದರು.