21 ರಂದು ಹೂಗಾರ ಸಮಾಜದ ಪೂರ್ವಭಾವಿ ಸಭೆ

ಅಫಜಲಪುರ:ಜೂ.19: ಹೂಗಾರ ಸಮಾಜದ ಸಂಘಟನೆ ಮತ್ತು ಬಲವರ್ಧನೆಗಾಗಿ ಜೂ. 21 ರ ಬುಧವಾರದಂದು ಅಫಜಲಪುರ ಪಟ್ಟಣದ ಕಲಬುರ್ಗಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಸರಸಂಬಾ ಕಲ್ಯಾಣ ಮಂಟಪದ ಮುಂಭಾಗದಲ್ಲಿರುವ ಶ್ರೀ ಗುರುದತ್ತ ಹೋಟೆಲ್ ನ ಆವರಣದಲ್ಲಿ ಮಧ್ಯಾಹ್ನ 2 ಗಂಟೆಗೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಹೂಗಾರ ಸಮಾಜದ ಹಿರಿಯ ಮುಖಂಡ ಅಶೋಕ ಆರ್. ಹೂಗಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅತ್ಯಂತ ಹಿಂದುಳಿದ ಹೂಗಾರ ಸಮಾಜವು ಸಾಮಾಜಿಕ ಕ್ಷೇತ್ರದಲ್ಲಿ ಮುಂದೆ ಬರಬೇಕಾದರೆ ಮೊದಲು ನಾವು ಸಂಘಟಿತರಾಗಬೇಕು. ಹೀಗಾಗಿ ಅಧ್ಯಕ್ಷ ಸ್ಥಾನದ ಹುದ್ದೆ ಸೇರಿದಂತೆ ಪದಾಧಿಕಾರಿಗಳು ಆಗಬಯಸುವ ಆಕಾಂಕ್ಷಿಗಳ ಪಟ್ಟಿ ತಯಾರಿಸಲು ಪೂರ್ವಭಾವಿ ಸಭೆ ಕರೆಯಲಾಗಿದೆ. ಹೀಗಾಗಿ ಸಮಾಜದ ಯುವಕರು ಮತ್ತು ಹಿರಿಯರು ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ನೀಡಬೇಕೆಂದು ಮನವಿ ಮಾಡಿದ್ದಾರೆ.