ಕನ್ನಡದ ಖ್ಯಾತ ವರನಟ ಡಾ.ರಾಜಕುಮಾರ ಅವರ ಜಯಂತಿ ಅಂಗವಾಗಿ ಇಂದು ಬೆಳಿಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ಸರಳ ಜಯಂತಿ ಆಚರಣೆ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.