ಉತ್ತರಪ್ರದೇಶದ ಮಥುರಾ ಜೈಲಿನಲ್ಲಿ ಅಕ್ರಮವಾಗಿ ಬಂಧಿಸಿಟ್ಟಿರುವ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಅಲ್ಲಿನ ಮುಖ್ಯಮಂತ್ರಿಯವರನ್ನು ಆಗ್ರಹಿಸಿ ಮೈಸೂರು ಅಪರ ಜಿಲ್ಲಾಧಿಕಾರಿಗಳಿಗೆ ಇಂದು ಬೆಳಗ್ಗೆ ಜಿಲ್ಲಾ ಪತ್ರಕರ್ತರ ಸಂಘದ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು, ಇದೇ ವೇಳೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್. ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಎಂ, ನಗರ ಕಾರ್ಯದರ್ಶಿ ರಂಗಸ್ವಾಮಿ. ಪಿ, ಕಾರ್ಯಕಾರಿ ಸಮಿತಿ ಸದಸ್ಯ ರಂಗಸ್ವಾಮಿ ಮಾದಾಪುರ ಮತ್ತಿತರರು ಭಾಗವಹಿಸಿದ್ದರು.