ಕೋವಿಡ್ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಬೆಳಿಗ್ಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರುಗಳಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಬಸವರಾಜ ಬೊಮ್ಮಾಯಿ, ಭೈರತಿ ಬಸವರಾಜು, ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.