ಧಾರವಾಡದ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಮಹಾನಗರ ಪಾಲಿಕೆ ಆಯುಕ್ತ ಹೆಗಡೆ, ಎಸ್.ಪಿ. ಕೃಷ್ಣಕಾಂತ, ಸಿಇಓ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.