ಸೋಂಕು ತಡೆಗೆ ಸ್ವಚ್ಛತೆ ಅಗತ್ಯ: ಕಾಂಗ್ರೆಸ್ ಮನವಿ

ಬೆಂಗಳೂರು,ಏ.೩೦- ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸಭೆ ನಡೆಸಲಾಯಿತು.
ಐಎನ್‌ಟಿಯುಸಿ ರಾಜ್ಯ ಅಧ್ಯಕ್ಷ ಎಸ್.ಎಸ್ ಪ್ರಕಾಶಂ ಕೆಪಿಸಿಸಿ ವಕ್ತಾರ ವಿ.ಶಂಕರ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪಕ್ಷದ ತಮಿಳು ಮುಖಂಡರು, ಕಾರ್ಯಕರ್ತರು ಮತ್ತು ಸಮಿತಿಯ ಸದಸ್ಯರು ಪಾಲ್ಗೊಂಡು, ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಅಗತ್ಯ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಮುಖ ಗವಸು ಧರಿಸಿ, ಸ್ಯಾನಿಟೈಸರ್ ಬಳಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಮುಖಂಡರು ಸಲಹೆ ನೀಡಿದರು.
ಈ ಸಭೆಯಲ್ಲಿ ಪಕ್ಷದ ಬೆಳವಣಿಗೆ ಕುರಿತಂತೆ ಚರ್ಚಿಸಲಾಯಿತು.
ಸಭೆಯಲ್ಲಿ ಮಾಜಿ ಪಾಲಿಕೆ ಸದಸ್ಯ ಆರ್. ರಾಜೇಂದ್ರನ್ ಸೇರಿದಂತೆ ಹಲವರು ಭಾಗವಹಿಸಿದ್ದರು.