ಧಾರವಾಡ ಜಿಲ್ಲಾಧಿಕಾರಿ ನೂತನ ಸಭಾಭವನದಲ್ಲಿಂದು ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರು ಕೊರೊನಾ ಚಿಕಿತ್ಸೆಗೆ ಶೇಕಡಾ 50 ರಷ್ಟು ಬೆಡ್‍ಗಳನ್ನು ಮೀಸಲಿಡುವ ಕುರಿತಂತೆ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಪೆÇೀಲಿಸ್ ಆಯುಕ್ತ ಲಾಬುರಾಮ, ಎಸ್. ಪಿ ಕೃಷ್ಣಕಾಂತ, ಸಿಇಓ, ಜಿಲ್ಲಾ ಆರೋಗ್ಯಾಧಿಕಾರಿ, ಹಾಗೂ ಜಿಲ್ಲೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.