ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಎಂ.ಎಸ್. ರಾಮಯ್ಯ ಆಸ್ಪತ್ರೆಯ ಆಡಳಿತ ಮಂಡಳಿಯವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ೪೫೦ ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲು ಮುಂದಾಗಿದ್ದಾರೆ. ಸಂಸದ ಪಿ.ಸಿ ಮೋಹನ್, ಯೇ.ಎಸ್. ರಾಮಯ್ಯ ಆಸ್ಪತ್ರೆಯ ಅಧ್ಯಕ್ಷ ಜಯರಾಂ, ಆಡಳಿತಾಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಉಪಸ್ಥಿತರಿದ್ದರು.