೫ ಎ ೫

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಾವಿರಾರು ಮಂದಿಗೆ ತರಕಾರಿ, ಆಹಾರ ಧಾನ್ಯಗಳ ಕಿಟ್ ಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಶಾಸಕ ರವೀಂದ್ರ ಶ್ರೀಕಂಠಯ್ಯ ಇದರ ಪ್ರಾಯೋಜಕತ್ವ ವಹಿಸಿದ್ದರು. ಇದಲ್ಲದೆ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಸ್ಕ್ ಸೇರಿದಂತೆ, ಆರೋಗ್ಯ ಮುನ್ನೆಚ್ಚರಿಕೆಯ ಕಿಟ್‌ಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.