ಬಾದಾಮಿ ಮಾಜಿ ಶಾಸಕ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಇವರು ಶನಿವಾರ ನಗರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ರೋಗಿಗಳ ಮತ್ತು ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಮಂಜುನಾಥ ಹೊಸಮನಿ, ಸದಸ್ಯ ರಾಜಮಹ್ಮದ ಬಾಗವಾನ, ಮುಖಂಡ ಪಿ.ಆರ್.ಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಯಲಿಗಾರ, ಆನಂದ ಶಿಲ್ಪಿ ಹಾಜರಿದ್ದರು.