Cm yudiurappa meeting with minister at krishna 

ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡವರಿಗೆ ಮತ್ತು ಶ್ರಮಿಕ ವರ್ಗದವರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಹಾಗೂ ಲಾಕ್‌ಡೌನ್ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರುಗಳ ಚರ್ಚೆ ನಡೆಸಿದರು. ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಡಾ. ಸಿ.ಎನ್ ಅಶ್ವತ್ಥನಾರಾಯಣ, ಸಚಿವರುಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿ. ಸೋಮಣ್ಣ, ಮಾಧುಸ್ವಾಮಿ, ಭೈರತಿ ಬಸವರಾಜು, ಎಸ್.ಟಿ. ಸೋಮಶೇಖರ್, ಅರವಿಂದ ಲಿಂಬಾವಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.