
ಕಲಬುರಗಿ,ಏ.21-ಅಖಿಲ ಭಾರತ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷರಾದ ಲಾಲಜಿ ದೇಸಾಯಿ, ಕರ್ನಾಟಕ ಸೇವಾ ದಳದ ಉಸ್ತುವಾರಿ ಮತ್ತು ಕಾರ್ಯದರ್ಶಿ ಬಲರಾಮಸಿಂಗ ಬದೋರಿಯಾ ಮತ್ತು ವಿನೋದ ಕೊಲಪ್ಪಕರ, ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಅವರು ಏ.26 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇವಾ ದಳದ ಕಲಬುರಗಿ ವಿಭಾಗ ಮಟ್ಟದ ಪೂರ್ವಭಾವಿ ಸಭೆಯನ್ನು ಏ.23 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.
ಅಂದಿನ ಸಭೆಗೆ ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಜೇವರ್ಗಿ ಶಾಸಕ ಡಾ.ಅಜಯಸಿಂಗ್, ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಮಾಜಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಿ.ಆರ್.ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮುಖಂಡರಾದ ಸುಭಾಷ ಗುತ್ತೇದಾರ, ಬಾಬುರಾವ ಚಿಂಚನಸೂರ ಆಗಮಿಸಲಿದ್ದಾರೆ.
ಆದ್ದರಿಂದ ಕಲಬುರಗಿ ವಿಭಾಗದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ, ವಿಜಯನಗರ ಜಿಲ್ಲೆಯ ಅಧ್ಯಕ್ಷರು, ರಾಜ್ಯ ಮಟ್ಟದ ಪದಾಧಿಕಾರಿಗಳು, ತರಬೇತಿ ಪಡೆದಿರುವ ಸೇವಾದಳದ ಕಾರ್ಯಕರ್ತರು, ಮಹಿಳಾ ಸಂಘಟಕಿಯರು, ಯಂಗ್ ಬ್ರಿಗೇಡ್ ಸಂಘಟಕರು, ಸಂಚಾಲರು ಸರಿಯಾದ ಸಮಯಕ್ಕೆ ಸಮವಸ್ತ್ರದೊಂದಿಗೆ ಆಗಮಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾ ದಳದ ರಾಜ್ಯ ಉಪಾಧ್ಯಕ್ಷ ಕುಪೇಂದ್ರ ಎಸ್.ಧೂಳೆ ತಿಳಿಸಿದ್ದಾರೆ.