23 ರಂದು ನಗರಕ್ಕೆ ಡಿಕೆಶಿ

ಕಲಬುರಗಿ:ನ.21:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ರವರು ನ.23 ರಂದು ರಾತ್ರಿ 10 ಕ್ಕೆ ಕಲಬುರಗಿ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.ನ.24 ರಂದು ಬೆಳಿಗ್ಗೆ 8.30ಕ್ಕೆ ಕಾಂಗ್ರೆಸ್ ಮುಖಂಡರೊಂದಿಗೆ ಪಕ್ಷದ ಸಂಘಟನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸುವರು.
ಬೆಳಿಗ್ಗೆ 10.30 ಕ್ಕೆ ಕಲಬುರಗಿಯಿಂದ ರಸ್ತೆ ಮಾರ್ಗವಾಗಿ ಬಸವಕಲ್ಯಾಣಕ್ಕೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದ್ದಾರೆ.