ದಕ್ಷಿಣ ಕನ್ನಡ ಜಿಲ್ಲೆಯ ಸಚಿವರು ಹಾಗೂ ಶಾಸಕರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಇಂದು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ತೌಕ್ತೆ ಚಂಡಮಾರುತದಿಂದ ಆದ ಹಾನಿಗೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಿತು. ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಅಂಗಾರ, ಶಾಸಕರಾದ ಸಂಜೀವ್ ಮಟ್ಟಂದೂರ್, ರಾಜೇಶ್ ನಾಯ್ಕ್ ಇದ್ದಾರೆ.