ಕಾರ್ಯನಿರ್ವಹಣಾಧಿಕಾರಿಯವರ ಶಿಫಾರಸ್ಸಿನ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ 3 ವೆಂಟಿಲೇಟರ್ ಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಕಿಮ್ಸ್ ನಿರ್ದೇಶಕರಾದ ಡಾ, ರಾಮಲಿಂಗಪ್ಪ ಅಂಟರತಾನಿ ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡರ, ಜನಜಾಗೃತಿ ವೇದಿಕೆ ಪದಾಧಿಕಾರಿ ಹಾಗೂ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತರಾದ ಸಂತೋಷ್ ಆರ್. ಶೆಟ್ಟಿ, ಕಿಮ್ಸ್ ವೈದ್ಶಕೀಯ ಅಧೀಕ್ಷಕರಾದ ಡಾ, ಅರುಣ್ ಕುಮಾರ್ ಉಪ ಅಧೀಕ್ಷ ಡಾ, ರಾಜಶೇಖರ್ ದ್ಶಾವೇರಿ, ಸಂಸ್ಥೆಯ ನಿರ್ದೇಶಕ ಸುರೇಶ್ ಎಂ. ದಿನೇಶ್, ಎಂ ಯೋಜನಾಧಿಕಾರಿ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.